ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶದ ಮೇರೆಗೆ ಕನ್ನಡ ರಾಜ್ಯೋತ್ಸವದ ನಿಮಿತ್ತ ನಾವು ದಿನಾಂಕ 28.10. 2021 ರಂದು ನಮ್ಮ ಶಾಲೆಯಲ್ಲಿ ಸಾಮೂಹಿಕ ಕನ್ನಡ ಗೀತಗಾಯನ ಕಾರ್ಯಕ್ರಮವನ್ನು ಏರ್ಪಡಿಸಿದ್ದೆವು. ಅದರಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ರಾಷ್ಟ್ರ ಕವಿ ಡಾ. ಕುವೆಂಪುರವರ “ಬಾರಿಸು ಕನ್ನಡ ಡಿಂಡಿಮವ”, ಡಾ. ನಿಸ್ಸಾರ್ ಅಹ್ಮದ್ ರವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಈ ಗೀತೆಗಳನ್ನು ಬೆಳಿಗ್ಗೆ 11.೦೦ ಗಂಟೆಗೆ ಹಾಡಿಸಲಾಯಿತು. ಆ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಪ್ರಾಚಾರ್ಯರು, ಶಿಕ್ಷಕರು ಹಾಗು ಶಿಕ್ಷಕೇತರ ಸಿಬ್ಬಂದಿಗಳು , ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.