Subscribe Now!

Get the Latest Insights

ಕರ್ನಾಟಕ ರಾಜ್ಯೋತ್ಸವ ಆಚರಣೆ

                        

                        

 

ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದೇ ನವೆಂಬರ್ 1 2021ರಂದು ಕನ್ನಡಿಗರ ಹೆಮ್ಮೆಯ ಹಬ್ಬವಾದ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು.
ಶಾಲೆಯ ತುಂಗಭದ್ರಾ ಸದನದ ಆಶ್ರಯದಲ್ಲಿ ಈ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.ಶಾಲೆಯ ಪ್ರಾಚಾರ್ಯೆ ಶ್ರೀಮತಿ ಉಷಾ ಸಂತೋಷ್ ಹಾಗೂ ಸಹ ಸಂಯೋಜಕರಾದ ನಿರ್ಮಲಾ ಪಾಟೀಲ್ ಮತ್ತು ಸಾವಿತ್ರಿ ಗಾತಾಡೆ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರವನ್ನು ಪೂಜಿಸುವುದರ ಮೂಲಕ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಮಕ್ಕಳು ಕನ್ನಡದ ಮಹತ್ವವನ್ನು ಕುರಿತು ಮಾತನಾಡಿದರು. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಎಂಟು ಜನ ಸಾಹಿತಿಗಳ ಮಾಹಿತಿಯನ್ನು ವಿದ್ಯಾರ್ಥಿಗಳು ವಿಸ್ತಾರವಾಗಿ ತಿಳಿಸಿದರು. ಕನ್ನಡದ ಮಹತ್ವವನ್ನು ಸಾರುವ ಕವನಗಳನ್ನು ಹಾಡಿದರು. ನಂತರ ತುಂಗಭದ್ರಾ ಸದನದ ವಿದ್ಯಾರ್ಥಿನಿಯರು ಹಚ್ಚೇವು ಕನ್ನಡದ ದೀಪ ಎಂಬ ನೃತ್ಯ ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರಗನ್ನು ತಂದು ಕೊಟ್ಟರು.

 

                   

 

                           

Share the Post:

Related Posts